- Advertisement -
- Advertisement -
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿAದ ಮೇ. 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಲ್ಕು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಇಂದಿನಿAದ ಮುಂದಿನ 5 ದಿನಗಳ ವರೆಗೆ ಅಂದರೆ ಮೇ. 3 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ 5 ದಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
- Advertisement -