Friday, June 19, 2026
spot_imgspot_img
spot_imgspot_img

ಮಂಗಳೂರು: ಕೋವಿಡ್‍ನಿಂದ ಮೃತರಾದ ವ್ಯಕ್ತಿಯನ್ನು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಿದ ಬಜರಂಗದಳದ ಕಾರ್ಯಕರ್ತರು

- Advertisement -
- Advertisement -

ಮಂಗಳೂರು: ಕೋವಿಡ್ ಬಂದು ಮೃತಪಟ್ಟರೆ ಅದರ ವ್ಯಥೆ ಕೇಳತೀರದು. ಕೊನೆಗಾಲದಲ್ಲಿ ಅಂತ್ಯಸಂಸ್ಕಾರಕ್ಕೂ ಯಾರೂ ಬಾರದ ಸ್ಥಿತಿ ಈ ಕಾಲಮಾನದ್ದಾಗಿದೆ. ಕೋವಿಡ್ ಪಾಸಿಟಿವ್‍ನಿಂದ ಮೃತಪಟ್ಟರೆ ಅವರ ಅಂತ್ಯಸಂಸ್ಕಾರಕ್ಕೆ ಯಾರೂ ಕೂಡ ಭಾಗಿಯಾಗದ ಸ್ಥಿತಿ ನಿರ್ಮಾಣವಾಗಿದೆ.

ಅವರವರ ಧರ್ಮದ ಅನುಸಾರ ಅಂತ್ಯಸಂಸ್ಕಾರ ಮಾಡಲು ಕೂಡ ಆಗುವುದಿಲ್ಲ. ಇದನ್ನು ಮನಗಂಡ ಮಂಗಳೂರಿನ ಬಜರಂಗದಳದ ಕಾರ್ಯಕರ್ತರು ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೇರವೇರಿಸಲಾಯಿತು.

ಮಂಗಳೂರಿನ ಬಜರಂಗದಳದ ಕಾರ್ಯಕರ್ತರಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರ ಹಿಂದೂ ಸಂಪ್ರದಾಯದಂತೆ ನೆರವೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

- Advertisement -

Related news

error: Content is protected !!