Saturday, October 17, 2026
spot_imgspot_img
spot_imgspot_img

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅನಾಹುತ!

- Advertisement -
- Advertisement -

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದ ಘಟನೆ ಇಂದು ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ಇದರಿಂದಾಗಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆ ಆಗದೆ ಇದ್ದುದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

driving
- Advertisement -

Related news

error: Content is protected !!