- Advertisement -
- Advertisement -
ದ.ಕ.ಜಿಲ್ಲೆಯಲ್ಲಿ ಕೊರೋನ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮೇ 1 ಶನಿವಾರದಂದು 933 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ಇಬ್ಬರು ಮೃತಪಟ್ಟಿದ್ದು ಮೃತಪಟ್ಟವರ ಸಂಖ್ಯೆ 759ಕ್ಕೇರಿದೆ.
ಜಿಲ್ಲೆಯಲ್ಲಿ ಕೊರೋನ ಸೋಂಕಿನಿAದ ಗುಣಮುಖರಾದ 404 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 46,042 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 38,270 ಮಂದಿ ಗುಣಮುಖರಾಗಿದ್ದಾರೆ. ಸದ್ಯ 7,013 ಸಕ್ರಿಯ ಪ್ರಕರಣಗಳಿದ್ದು ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ 50,377 ಪ್ರಕರಣ ದಾಖಲಿಸಲಾಗಿದೆ. 52,69,130 ರೂ. ದಂಡ ವಸೂಲಿಯನ್ನು ಮಾಡಲಾಗಿದೆ. ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಶನಿವಾರ ಕೋವಿಡ್ -19 ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ 9 ಪ್ರಕರಣ ದಾಖಲಾಗಿದೆ. ಮಾಸ್ಕ್ ಧರಿಸದ 310 ಪ್ರಕರಣ ದಾಖಲಿಸಿ, 53 ವಾಹನಗಳನ್ನು ವಶಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
- Advertisement -