- Advertisement -
- Advertisement -
ಬೆಳಗಾವಿ: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರ ಕೊನೆಗೂ ಮಂಗಳಾ ಅಂಗಡಿ ತೆಕ್ಕೆಗೆ ಬಿದ್ದಿದೆ.

ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬೆಳಗಾವಿ ಉಪ ಸಮರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಜಯ ಗಳಿಸಿದ್ದಾರೆ. ಮಂಗಳಾ ಒಟ್ಟು 35,202 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಬೆಳಗಾವಿಯಿಂದ ಆಯ್ಕೆ ಆದ ಮೊದಲ ಮಹಿಳಾ ಸಂಸದೆ ಎಂಬ ಹೆಗ್ಗಳಿಕೆಗೆ ಮಂಗಳಾ ಅಂಗಡಿ ಪಾತ್ರರಾಗಿದ್ದಾರೆ.

ಬೆಳಗ್ಗಿನಿಂದ ಸತತ 80 ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಸತೀಶ್ ಜಾರಕಿಹೊಳಿ ಕೊನೆ ಕ್ಷಣದಲ್ಲಿ ಸೋಲನ್ನು ಅನುಭವಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿಯಿದೆ.


- Advertisement -








