Saturday, July 5, 2025
spot_imgspot_img
spot_imgspot_img

ಉಜಿರೆ: ಬ್ಯಾಂಕಿನ ಸಭಾಂಗಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಿಇಒ!

- Advertisement -
- Advertisement -

ಉಜಿರೆ: ಧರ್ಮಸ್ಥಳದ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರನ್ (57) ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ಸೋಮವಾರ ಬೆಳಿಗ್ಗೆ 7.30ಕ್ಕೆ ಬ್ಯಾಂಕಿಗೆ ಬಂದವರು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿದ್ದರು. ಮಧ್ಯಾಹ್ನ ಬ್ಯಾಂಕಿನ ಸಭಾಭವನದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ನಿವೃತ್ತಿಗೆ ಮೊದಲೇ ಕೆಲಸಕ್ಕೆ ರಾಜೀನಾಮೆ ನೀಡಬೇಕೆಂದು ಬ್ಯಾಂಕಿನ ನಿರ್ದೇಶಕರಿಂದ ಒತ್ತಡ ಇತ್ತು ಎಂದು ಹೇಳಲಾಗುತ್ತಿದೆ. ಮಾಜಿ ಶಾಸಕ ಕೆ.ವಸಂತ ಬಂಗೇರ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!