Tuesday, July 8, 2025
spot_imgspot_img
spot_imgspot_img

ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿರಿಸಬೇಕಿದ್ದ ಯುವತಿ ಸಾವು!

- Advertisement -
- Advertisement -

ವಿಜಯಪುರ: ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.23 ರಂದು ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿರಿಸಬೇಕಿದ್ದ ಯುವತಿ ಕೋವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದೆ.

ಪಟ್ಟಣದ ವಿಬಿಸಿ ಹೈಸ್ಕೂಲ್ ಶಿಕ್ಷಕ ಸುಭಾಷ ಐಹೊಳ್ಳಿ ಅವರ ಪುತ್ರಿ ಶ್ರುತಿ ಐಹೊಳ್ಳಿ (24) ಕೋವಿಡ್ ಸೋಂಕಿಗೆ ಬಲಿಯಾದವರು. ಬಿಎಸ್ಸಿ, ಬಿಎಡ್ ಪದವೀಧರೆಯಾಗಿದ್ದ ಶ್ರುತಿ ಗಣಿತ ವಿಷಯದಲ್ಲಿ ಪಾಂಡಿತ್ಯ ಹೊಂದಿದ್ದರು. ಮುದ್ದೇಬಿಹಾಳ ಕೆಪಿಬಿಎಂಪಿಎಸ್ ಶಾಲೆಯಲ್ಲಿ ಎರಡು ವರ್ಷಗಳ ಕಾಲ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು. ಪಟ್ಟಣ ಪ್ರದೇಶದಲ್ಲಿ ಕರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಸ್ವಗ್ರಾಮದಲ್ಲಿ ತೆರಳಿ ವಾಸವಾಗಿದ್ದರು.

ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಶ್ರುತಿ ಆಸ್ಪತ್ರೆಗೆ ದಾಖಲಾಗಿದ್ದು ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮದುವೆಗೆ ಎಲ್ಲ ತಯಾರಿ ಮಾಡಿಕೊಂಡು ಬಟ್ಟೆ, ಚಿನ್ನಾಭರಣ ಖರೀದಿಸಿ ಮದುವೆಯ ಸಂಭ್ರಮದಲ್ಲಿದ್ದ ಮನೆ ಈಗ ಸೂತಕದ ಛಾಯೆ ಆವರಿಸಿದೆ. ಮೃತ ಶ್ರುತಿಗೆ ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.

- Advertisement -

Related news

error: Content is protected !!