Tuesday, July 1, 2025
spot_imgspot_img
spot_imgspot_img

ದೇಶದಲ್ಲಿಂದು 24 ಗಂಟೆಯಲ್ಲಿ 3.48 ಲಕ್ಷ ಜನರಿಗೆ ಕೋವಿಡ್ ಪಾಸಿಟಿವ್!

- Advertisement -
- Advertisement -

ನವದೆಹಲಿ: ಭಾರತದಲ್ಲಿ ಕೊರೊನಾ ಅಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 3,48,421 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,33,40,938ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4205 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,54,197ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 37,04,099 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,93,82,642 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,55,338 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನ 19,83,804 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 30,75,83,991 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 17,52,35,991 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!