Thursday, September 3, 2026
spot_imgspot_img
spot_imgspot_img

ಭಾರತದಲ್ಲಿ 3.44 ಲಕ್ಷ ಜನ ಕೋವಿಡ್ ನಿಂದ ಗುಣಮುಖ!

- Advertisement -
- Advertisement -

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,43,144 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 4 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,62,317ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,893ಕ್ಕೆ ಏರಿಕೆಯಾಗಿದೆ.

driving

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,44,776 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,00,79,599ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,75,515 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 31,13,24,100 30,75,83,991 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 17,92,98,584 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

- Advertisement -

Related news

error: Content is protected !!