- Advertisement -
- Advertisement -
ಉಳ್ಳಾಲ: ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ ಉದ್ಯಮಿಯನ್ನು ಉಳ್ಳಾಲ ಪೊಲೀಸರು ಇಂದು ಬಂಧಿಸಿದ್ದು, ಆರೋಪಿ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಸ್ವಾಲಿಝ್ ಇಕ್ಬಾಲ್ (45) ಬಂಧಿತ ಆರೋಪಿಯಾಗಿದ್ದು, ಫರ್ನಿಚರ್ ಅಂಗಡಿ ಸಹಿತ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದ ಸ್ವಾಲಿಝ್ ಇಕ್ಬಾಲ್ ಚಾಮುಂಡೇಶ್ವರಿ ದೇವಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ಮೂರು ದಿನಗಳಿಂದ ವೈರಲ್ ಆಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ವೈರಲ್ ಆಗುತ್ತಿದ್ದಂತೆ, ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟಕರು ದೂರು ದಾಖಲಿಸಿದ್ದು, ಅದರಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಾಗಿತ್ತು. ಇಂದು ಈ ಬಗ್ಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.



- Advertisement -








