- Advertisement -
- Advertisement -
ಕುಂದಾಪುರ: ಫ್ಲೈಓವರ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಕಾರೊಂದು ಅಪಘಾತಕ್ಕೀಡಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಬೈಂದೂರಿನ ಬಂಟವಾಡಿಯ ವಸಂತಿ(35) ಎಂದು ಗುರುತಿಸಲಾಗಿದೆ. ಸಾಸ್ತಾನದಿಂದ ಹಟ್ಟಿಕುದ್ರುಗೆ ಹೋಗುತ್ತಿದ್ದ ಕಾರು, ಟಯರ್ ಸ್ಪೋಟಗೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಿಂದ ಗಂಭೀರ ಗಾಯಗೊಂಡ ವಸಂತಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ. ಕಾರಿನಲ್ಲಿ ಒಟ್ಟು ಐವರಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -