Tuesday, July 28, 2026
spot_imgspot_img
spot_imgspot_img

ಮಂಗಳೂರು: ಟಗ್ ಬೋಟ್ ದುರಂತ ಪ್ರಕರಣ: ತನಿಖೆಗೆ ಆದೇಶ- ಮೃತ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಕಂದಾಯ ಸಚಿವ ಆರ್.ಅಶೋಕ್

- Advertisement -
- Advertisement -

ಮಂಗಳೂರು: ಅರಬ್ಬಿ ಸಮುದ್ರದ ಟಗ್ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಕಂದಾಯ ಸಚಿವ ಆರ್.ಅಶೋಕ್ ರವರು ತಲಾ 10 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ರವರು MRPL ಕಂಪನಿಯಿಂದ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

182 ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ, ಭಾಗಶಃ ಮನೆ ಹಾನಿಯಾದವರಿಗೆ 1ಲಕ್ಷ ರೂಪಾಯಿ ಪರಿಹಾರ, ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರದ ಆದೇಶಿಸಿದ್ದು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಸೂಚಿಸಿದೆ.

ಪ್ರಕರಣದ ಬಗ್ಗೆ ಕಂಪೆನಿ ಆರೋಪ-ಪ್ರತ್ಯಾರೋಪ ಮಾಡುತ್ತಿರುವ ಹಿನ್ನೆಲೆ ಘಟನೆ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ. ತನಿಖಾ ವರದಿ ಬಳಿಕ ತಪ್ಪಿದಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.

- Advertisement -

Related news

error: Content is protected !!