Saturday, June 6, 2026
spot_imgspot_img
spot_imgspot_img

ಇಂದು ಜಿಲ್ಲೆಯಲ್ಲಿ ಕೋವಿಡ್‌ಗೆ 6 ಬಲಿ; 807 ಮಂದಿಗೆ ಪಾಸಿಟಿವ್

- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರ ಮತ್ತೆ 6 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 821ಕ್ಕೇರಿದೆ. ಅಲ್ಲದೆ ಸೋಮವಾರ ಜಿಲ್ಲೆಯಲ್ಲಿ 807 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1656 ಮಂದಿ ಕೊರೋನ ಸೋಂಕಿನದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರಗೆ 8,07,108 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,41,977 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 65,131 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 52,649 ಮಂದಿ ಗುಣಮುಖರಾಗಿದ್ದಾರೆ. ಸದ್ಯ 11,661 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಸ್ಕ್ ನಿಯಮ ಉಲ್ಲಂಸಿದ 54,890 ಮಂದಿಯಿ0ದ 57,31,630 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!