Friday, June 26, 2026
spot_imgspot_img
spot_imgspot_img

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ; ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಚಿಕ್ಕಮಗಳೂರು: ಇಲ್ಲಿನ ಮೂಡಿಗೆರೆಯ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ದಲಿತ ಯುವಕನಿಗೆ ಠಾಣೆಯಲ್ಲಿ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಡಿ ಪಿಎಸ್ ಐ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಗೋಣಿಬೀಡು ಠಾಣಾ ವ್ಯಾಪ್ತಿಯ ಕಿರಗುಂದ ಗ್ರಾಮದ ಯುವಕ ಪುನೀತ್ ವಿವಾಹಿತ ಮಹಿಳೆ ಜೊತೆ ಮಾತನಾಡುತ್ತಿದ್ದು, ಇದರಿಂದ ಸಂಸಾರದಲ್ಲಿ ಗಲಾಟೆ ನಡೆಯುತ್ತಿದೆ ಎಂದು ಮಹಿಳೆಯ ಪತಿ ದೂರು ನೀಡಿದ್ದರು.

ದೂರು ನೀಡಿದ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ ಪಿಎಸ್ ಐ ಅರ್ಜುನ್ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದರು ಎಂದು ಪುನೀತ್ ಆರೋಪಿಸಿದ್ದರು.

- Advertisement -

Related news

error: Content is protected !!