Tuesday, July 1, 2025
spot_imgspot_img
spot_imgspot_img

ಕಡಬ: ವಿದ್ಯುತ್ ಶಾಕ್ ತಗುಲಿ ಯುವಕ ಸಾವು!

- Advertisement -
- Advertisement -

ಕಡಬ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಮೇ.24ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜೋ (35) ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿಗೆ ಸ್ಪರ್ಶಿಸಿ ವಿದ್ಯುತ್ ಹರಿದು ಲಿಜೋ ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

driving
- Advertisement -

Related news

error: Content is protected !!