Sunday, June 29, 2025
spot_imgspot_img
spot_imgspot_img

ಕಾಸರಗೋಡು: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಜೇಶ್ವರದ ನೂತನ ಶಾಸಕ

- Advertisement -
- Advertisement -

ಕಾಸರಗೋಡು: ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರಕ್ಕೆ ಆಯ್ಕೆಯಾಗಿರುವ ನೂತನ ಶಾಸಕ ಎ.ಕೆ.ಎಂ. ಅಶ್ರಫ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌ ಅವರು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇಂದು(ಸೋಮವಾರ) ಆರಂಭವಾಗಿರುವ ಕೇರಳ ವಿಧಾನಸಭೆ ಅಧಿವೇಶನದಲ್ಲಿ ಅಶ್ರಫ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನ ಮೆರೆದಿದ್ದಾರೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

- Advertisement -

Related news

error: Content is protected !!