Friday, June 26, 2026
spot_imgspot_img
spot_imgspot_img

ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ; ರಾಜ್ಯ ಸರಕಾರದ ಅಧಿಸೂಚನೆ

- Advertisement -
- Advertisement -

ಬೆಂಗಳೂರು: ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳು ಕರಾವಳಿಯಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯದ ಆದೇಶದಂತೆ ರಾಜ್ಯವೂ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12ರಿಂದ 200 ನಾಟಿಕಲ್ ಮೈಲಿ) ಜಲಪ್ರದೇಶ ದಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ ಹೇರಿ ಏಕರೂಪದ ಮೀನುಗಾರಿಕಾ ನಿಷೇಧವನ್ನು ಜಾರಿಗೊಳಿಸಲಾಗಿದೆ.

ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು, ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಆದ್ದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸುವಂತೆ ಜಿಲ್ಲಾ ಮೀನುಗಾರಿಕಾ ಇಲಾಖೆಯ ಹಿರಿಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

driving
- Advertisement -

Related news

error: Content is protected !!