Tuesday, September 1, 2026
spot_imgspot_img
spot_imgspot_img

ಭಾರತದಲ್ಲಿ 2.08 ಲಕ್ಷ ಕೊರೊನಾ ಪ್ರಕರಣ ಪತ್ತೆ!

- Advertisement -
- Advertisement -

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.08 ಲಕ್ಷ ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 4,157 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಮೇ 26) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಭಾರತದಲ್ಲಿ ಕೋವಿಡ್ ಸೋಂಕು ಎರಡನೇ ಅಲೆ ಹರಡಲು ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ 22.17 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ಹೇಳಿದೆ.

ಕೋವಿಡ್ ಸೋಂಕಿನಿಂದ ದೇಶದಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 3.11 ಲಕ್ಷಕ್ಕೆ ಏರಿಕೆಯಾಗಿದ್ದು, ಒಟ್ಟು ಕೋವಿಡ್ ಸೋಂಕು ಪ್ರಕರಣ 2.71 ಕೋಟಿಗೆ ಹೆಚ್ಚಳವಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೋವಿಡ್ 19 ಪ್ರಕರಣ ಇದ್ದಿದ್ದು, ಇದೀಗ ಪ್ರಕರಣಗಳ ಸಂಖ್ಯೆ ಇಳಿಕೆಯಾಗತೊಡಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕೋವಿಡ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

driving
- Advertisement -

Related news

error: Content is protected !!