Monday, June 30, 2025
spot_imgspot_img
spot_imgspot_img

ಒಂದೇ ದಿನದಲ್ಲಿ 2.83 ಲಕ್ಷ ಮಂದಿ ಕೋವಿಡ್ ನಿಂದ ಗುಣಮುಖ

- Advertisement -
- Advertisement -

ನವದೆಹಲಿ: ದೇಶದಲ್ಲಿ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,11,298 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,847 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,15,235ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 24,19,907ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,46,33,951 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,83,135 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 20,26,95,874 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!