Tuesday, June 23, 2026
spot_imgspot_img
spot_imgspot_img

ದೆಹಲಿಯಲ್ಲಿ 944 ಬ್ಲ್ಯಾಕ್ ಫಂಗಸ್ ಪ್ರಕರಣ ದಾಖಲು!

- Advertisement -
- Advertisement -

ನವದೆಹಲಿ: ದೆಹಲಿಯಲ್ಲಿ ಕೊರೋನಾ ವೈರಸ್ ಪ್ರಕರಣ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಇಲ್ಲಿವರೆಗೆ 944 ಕಪ್ಪು ಶಿಲೀಂಧ್ರ ಪ್ರಕರಣಗಳಿದ್ದು, 59 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ 944 ಕಪ್ಪು ಶಿಲೀಂಧ್ರ ಪ್ರಕರಣಗಳು ದಾಖಲಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 650 ಮತ್ತು ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ 300 ಪ್ರಕರಣಗಳಿವೆ. ಇನ್ನು ದೆಹಲಿಯಲ್ಲಿ ಈವರೆಗೂ 41 ಮಂದಿ ಬ್ಲಾಕ್ ಫಂಗಸ್ ಸೋಂಕಿತರು ಗುಣಮುಖರಾಗಿದ್ದಾರೆ. 748 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಕಪ್ಪು ಶಿಲೀಂಧ್ರ ಚಿಕಿತ್ಸೆಯಲ್ಲಿ ಬಳಸುವ ಔಷಧದ ಕೊರತೆ ಇದೆ. ಈಗಾಗಲೆ ಒಂದು ಸಾವಿರ ಚುಚ್ಚುಮದ್ದು ಪೂರೈಕೆಯಾಗಿದೆ. ಓರ್ವ ಸೋಂಕಿತನಿಗೆ ಚಿಕಿತ್ಸೆ ಪರಿಣಾಮಕಾರಿಯಾಗಿರಲು ದಿನಕ್ಕೆ 3 ರಿಂದ ನಾಲ್ಕು ಇಂಜೆಕ್ಷನ್ ಗಳು ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

- Advertisement -

Related news

error: Content is protected !!