Wednesday, June 24, 2026
spot_imgspot_img
spot_imgspot_img

ಸಿಬಿಎಸ್ಇ 12ನೇ ತರಗತಿಯ ಪರೀಕ್ಷೆಗಳು ರದ್ದು; ಪ್ರಧಾನಿ ಮೋದಿ ಘೋಷಣೆ

- Advertisement -
- Advertisement -

ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ 2021 ರ ಸಾಲಿನ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಿರ್ಧರಿಸಿದೆ.

ಎಲ್ಲಾ ಮಧ್ಯಸ್ಥಗಾರರೊಂದಿಗೆ ವ್ಯಾಪಕ ಚರ್ಚೆಯ ಬಳಿಕ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಎರಡು ದಿನಗಳ ಮುಂಚಿತವಾಗಿ ಈ ಸಭೆ ನಡೆದಿದೆ.

ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿದ ಮನವಿಗೆ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಸಿಬಿಎಸ್ಇ 12ನೇ ತರಗತಿ ಜೊತೆಗೆ ಐಸಿಎಸ್ ಪರೀಕ್ಷೆಗಳನ್ನು ಕೂಡ ರದ್ದು ಮಾಡಲಾಗಿದೆ.

- Advertisement -

Related news

error: Content is protected !!