Friday, June 26, 2026
spot_imgspot_img
spot_imgspot_img

ಉಡುಪಿ: ಕಾಡೆಮ್ಮೆಯೊಂದಕ್ಕೆ ಗುಂಡಿಕ್ಕಿ ಹತ್ಯೆ!

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ಕಾಡೆಮ್ಮೆಯೊಂದನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಈ ವಿಚಾರ ಸ್ಥಳೀಯರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಸ್ಥಳೀಯರಾದ ಶಂಕರನಾರಾಯಣ ಅವರು ಅರಣ್ಯ ಇಲಾಖೆಗೆ ಹಾಗೂ ಹೆಂಗವಳ್ಳಿ ಗ್ರಾಮ ಪಂಚಾಯತ್‌ಗೆ ಮಾಹಿತಿಯನ್ನು ನೀಡಿದ್ದಾರೆ. ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಕಾಡೆಮ್ಮೆಯನ್ನು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ನಡೆಸಿದರು.

ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್, ಶಂಕರನಾರಾಯಣ ವಲಯ ಅರಣ್ಯಧಿಕಾರಿ ಚಿದಾ ನಂದಪ್ಪ, ಹೆಂಗವಳ್ಳಿ ಗ್ರಾಪಂ ಅಧ್ಯಕ್ಷ ರಘುರಾಮ್ ಶೆಟ್ಟಿ ಹಾಗೂ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಕಾಡೆಮ್ಮೆಯನ್ನು ಹತ್ಯೆ ಮಾಡಿರುವವರ ಪತ್ತೆಗೆ ಅರಣ್ಯ ಇಲಾಖೆಯವರು ಕ್ರಮಕೈಗೊಂಡಿದ್ದು, ಮಾಂಸದ ಉದ್ದೇಶಕ್ಕಾಗಿ ಕಾಡೆಮ್ಮೆಯನ್ನು ಹತ್ಯೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Related news

error: Content is protected !!