Friday, June 26, 2026
spot_imgspot_img
spot_imgspot_img

ಪುತ್ತೂರು : ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರ ತಂಡ; 3 ಮಂದಿಯ ಬಂಧನ, ಓರ್ವ ಪರಾರಿ

- Advertisement -
- Advertisement -

ಪುತ್ತೂರು: ಕಾರಿನಲ್ಲಿ ಬಂದ ನಾಲ್ಕು ಜನ ದುಷ್ಕರ್ಮಿಗಳು ತಪಾಸಣೆ ನಡೆಸುತ್ತಿದ್ದ ಪೋಲೀಸರ ಮೇಲೆ ದಾಳಿ ನಡೆಸಿದ ಘಟನೆ ಪುತ್ತೂರಿನ ಕೆಮ್ಮಾಯಿ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಜೂನ್ 2 ರಂದು ನಡೆದಿದೆ.

ಚೆಕ್ ಪೋಸ್ಟ್ ಬಳಿ ಪೊಲೀಸರು ಗಾಡಿ ನಿಲ್ಲಿಸಲು ಹೇಳಿದ ವೇಳೆ ಗಾಡಿ ನಿಲ್ಲಿಸದೆ ಪೊಲೀಸರು ಜೊತೆ ವಾಗ್ವಾದ ನಡೆಸಿದ ಯುವಕರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಯುವಕರು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ನಾಲ್ವರಲ್ಲಿ ಮೂವರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಓರ್ವ ಪರಾರಿಯಾಗಿದ್ದಾನೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!