Saturday, August 8, 2026
spot_imgspot_img
spot_imgspot_img

ಶಿರೂರು ಮಠಕ್ಕೆ ಅಪ್ರಾಪ್ತ ಉತ್ತರಾಧಿಕಾರಿಯ ನೇಮಕ; ಹೈಕೋರ್ಟ್ ನಿಂದ ನೋಟಿಸ್!

- Advertisement -
- Advertisement -

ಬೆಂಗಳೂರು: ಉಡುಪಿಯ ಶಿರೂರು ಮಠಕ್ಕೆ ಅಪ್ರಾಪ್ತರೊಬ್ಬರನ್ನು ಪೀಠಾಧಿಪತಿಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಅಪ್ರಾಪ್ತ ಬಾಲಕರೊಬ್ಬರನ್ನು ಪೀಠಾಧಿಪತಿಯಾಗಿ ನೇಮಿಸಿರುವ ಕ್ರಮ ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ.ಲತವ್ಯ ಆಚಾರ್ಯ ಹಾಗೂ ಇತರ 4 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ರಾಜ್ಯ ಸರ್ಕಾರ, ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

- Advertisement -

Related news

error: Content is protected !!