Tuesday, April 30, 2024
spot_imgspot_img
spot_imgspot_img

ಮಂಗಳೂರು: ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಮಸೀದಿ ಮದ್ರಸಗಳಿಗೆ ಭತ್ಯೆ ನೀಡಲು ನಿರ್ಧಾರ – ವಿಶ್ವ ಹಿಂದು ಪರಿಷದ್ ವಿರೋಧ..!

- Advertisement -G L Acharya panikkar
- Advertisement -

ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರಕಾರದಿಂದ ತಸ್ತಿಕ್ ಭತ್ಯೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣಕನ್ನಡ ಜಿಲ್ಲೆಯ 41 ಮಸೀದಿ, ಮದರಸದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದು ಪರಿಷದ್ ವಿರೋಧಿಸುತ್ತದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದುಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಗಳಿಗೆ ಉಪಯೋಗಿಸುವುದನ್ನು ಖಂಡಿಸುವ ಮೂಲಕ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟರು ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!