Tuesday, April 30, 2024
spot_imgspot_img
spot_imgspot_img

ತುಳು ಭಾಷೆಗೆ ಅಧಿಕೃತ ಸ್ಥಾನದ ಬೇಡಿಕೆ; 1 ಲಕ್ಷಕ್ಕೂ ಅಧಿಕ ಟ್ವೀಟ್ ದಾಖಲು

- Advertisement -G L Acharya panikkar
- Advertisement -

ಮಂಗಳೂರು: ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ಸರಕಾರ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರೇ ಸಂಘಟನೆಗಳು ಮತ್ತು ತುಳು ಭಾಷಿಗರಿಂದ ಇಂದು ಟ್ವಿಟರ್ ಅಭಿಯಾನ ಆರಂಭಗೊಂಡಿದೆ. #TuluOfficialinKA_KL ಎಂಬ ಹ್ಯಾಷ್‍ಟ್ಯಾಗ್‍ನೊಂದಿಗೆ ಅಭಿಯಾನ ಆರಂಭವಾಗಿದೆ.

ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಯೋಜಿಸಲಾದ ಟ್ವೀಟ್ ಅಭಿಯಾನಕ್ಕೆ ಲಕ್ಷಾಂತರ ಮಂದಿ ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ತುಳುಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಟ್ವೀಟ್ ಅಭಿಯಾನ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಅಲ್ಲದೆ, ತುಳು ಸಾಹಿತ್ಯ ಅಕಾಡೆಮಿ, ಜನಪ್ರತಿನಿಧಿಗಳು ಗಣ್ಯರು ಕೂಡ ರಾಜ್ಯ, ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದರು. ಇದೆಲ್ಲವೂ ಸರ್ಕಾರದ ಗಮನಕ್ಕೆ ಬಂದರೂ ಫಲ ನೀಡಲಿಲ್ಲ. ಇದರಿಂದ ಮತ್ತೊಂದು ಟ್ವಿಟರ್ ಅಭಿಯಾನ ಇಂದು ನಡೆದಿದೆ.

ಈ ಟ್ವೀಟ್ ಅಭಿಯಾನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ಗಳು ದಾಖಲಾಗಿವೆ.

- Advertisement -

Related news

error: Content is protected !!