- Advertisement -
- Advertisement -
ಕಲಬುರಗಿ: ನಗರದ ಹಿಂದಿ ಪ್ರಚಾರ ಸಭಾ ಮುಂಭಾಗದ ಮುಖ್ಯ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನೋರ್ವನನ್ನು ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ರವಿ ಕುಮಾರ್ ಗೋಟೂರ್ ಅಲಿಯಾಸ್ ರವಿ ಪೂಜಾರಿ (30). ಈತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದು, ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೊಲೆಯಾದ ವ್ಯಕ್ತಿ 2019ರಲ್ಲಿ ಯುವತಿಯೋರ್ವಳ ಕೊಲೆ ಪ್ರಕರಣದಕ್ಕೆ ಸಂಬಂಧಿಸಿ ಜೈಲು ಸೇರಿದ್ದು, ಕಳೆದ ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದನು. ಈತ ಕಳೆದ ರಾತ್ರಿ ಎರಡು ಗಂಟೆ ಸುಮಾರಿಗೆ ನಡು ರಸ್ತೆಯಲ್ಲೇ ಭೀಕರವಾಗಿ ಕೊಲೆಯಾಗಿದ್ದಾನೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



- Advertisement -








