Tuesday, September 1, 2026
spot_imgspot_img
spot_imgspot_img

ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷ, ಶಿಸ್ತಿನ ಪಕ್ಷ; ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಕೆಲಸ ಮಾಡುವವರ ವಿರುದ್ಧ ಪಕ್ಷವೇ ಕ್ರಮ ಕೈಗೊಳ್ಳಲಿದೆ; ಅರುಣ್ ಸಿಂಗ್

- Advertisement -
- Advertisement -

ಬೆಂಗಳೂರು: ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಇಬ್ಬರಿಂದ ಮೂವರು ಕೆಲಸ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಭಾರತೀಯ ಜನತಾ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷ. ಶಿಸ್ತಿನ ಪಕ್ಷ. ಈಗಾಗಲೇ ಅವರಿಗೆ ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚಿಸಲಾಗಿದೆ ಎಂದರು.

ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಬೇಕು ಎಂದು ಸೂಚಿಸಿದರು.

- Advertisement -

Related news

error: Content is protected !!