Saturday, June 27, 2026
spot_imgspot_img
spot_imgspot_img

ಅಕ್ರಮ ಸಂಬಂಧ ಶಂಕಿಸಿ ಪತ್ನಿಯನ್ನು ಬರ್ಬರ ಹತ್ಯೆಗೈದ ಪತಿ!

- Advertisement -
- Advertisement -

ಬೆಂಗಳೂರು: ಪತ್ನಿಯ ಮೇಲೆ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅರಕೆರೆ ಬಳಿಯ ಬಿಟಿಎಸ್ ಲೇಔಟ್​​ನಲ್ಲಿ ನಡೆದಿದೆ.

ಕೊಲೆಯ ಆರೋಪಿಯನ್ನು ತಮಿಳುನಾಡು ಮೂಲದ ಮಣಿ (36) ಗುರುತಿಸಲಾಗಿದೆ.

ಆರೋಪಿ ಮಣಿ ಹಾಗೂ ಆತನ ಪತ್ನಿ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು ವಿಪರೀತ ಮದ್ಯಪಾನ ಚಟ ಹೊಂದಿದ್ದ ಮಣಿ ಅಕ್ರಮ ಸಂಬಂಧ ಶಂಕೆಯಿಂದ ಪತ್ನಿಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಈ ಘಟನೆಯು ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!