- Advertisement -
- Advertisement -
ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷರು ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ.

ಈ ಪ್ರಕರಣದ ಮುಖ್ಯ ಆರೋಪಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್ ನನ್ನು ರಕ್ಷಿಸಲು ಬಿಜೆಪಿ ಜಿಲ್ಲಾಧ್ಯಕ್ಷರು ಸೇರಿದಂತೆ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದರು.

ಈ ಬಗ್ಗೆ ಎಸ್ಪಿಯವರಿಗೆ ನೀಡಿರುವ ಮನವಿಯಲ್ಲಿ ವಿನಂತಿಸಲಾಗಿದೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆಯಾಗಬೇಕಿದೆ ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದರು.



- Advertisement -








