Monday, June 22, 2026
spot_imgspot_img
spot_imgspot_img

ಮೊಬೈಲ್ ಕಿತ್ತು ಪರಾರಿಯಾಗುತ್ತಿದ್ದ ಆರೋಪಿ ಅರೆಸ್ಟ್; ಈತನ ಬಳಿಯಿತ್ತು ಲಕ್ಷಾಂತರ ಬೆಳೆಬಾಳುವ 20 ಮೊಬೈಲ್ಸ್

- Advertisement -
- Advertisement -

ಬೆಂಗಳೂರು: ಒಬ್ಬಂಟಿಯಾಗಿ ಓಡಾಡೋರನ್ನ ಟಾರ್ಗೆಟ್ ಮಾಡಿ ಮೊಬೈಲ್ ಕಿತ್ತು ಪರಾರಿಯಾಗುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇಮ್ರಾನ್(27) ಬಂಧಿತ ಆರೋಪಿಯಾಗಿದ್ದಾನೆ.

ಈತ ರಸ್ತೆಯಲ್ಲಿ ಒಬ್ಬಂಟಿಯಾಗಿ ಯಾರು ಹೋಗುತ್ತಾರೋ, ಅವರನ್ನು ಗಮನಿಸಿ ಬೇಗ ಅವರಿಂದ ಮೊಬೈಲ್ ಅನ್ನು ಕಿತ್ತುಕೊಂಡು ಪರಾರಿಯಾಗುವುದೇ ಇವನ ಕೆಲಸವಾಗಿತ್ತು. ಸದ್ಯ ಈತ ಈಗ ಆರೋಪಿ ಪೊಲೀಸರ ಅತಿಥಿಯಾಗಿದ್ದು, ಈತನಿಂದ 2.40 ಲಕ್ಷ ಬೆಲೆಬಾಳುವ ವಿವಿಧ ಕಂಪನಿಯ 20 ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಸಂಬ0ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!