- Advertisement -
- Advertisement -
ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಕಂಬಳಬೆಟ್ಟುವಿನಲ್ಲಿ ನಡೆದಿದೆ.
ಗಂಭೀರ ಗಾಯಗೊಂಡವರನ್ನು ಅಳಿಕೆ ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದೆ.
ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಪ್ರಶಾಂತ್ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -