Sunday, June 21, 2026
spot_imgspot_img
spot_imgspot_img

ಮಂಗಳೂರು: ವಸತಿ ಗೃಹದಲ್ಲಿ ಸಿಕ್ಕಿ ಬಿದ್ದ ಜೋಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎರಡು ಪ್ರತ್ಯೇಕ ಪ್ರಕರಣ ದಾಖಲು..!

- Advertisement -
- Advertisement -

ಮಂಗಳೂರು: ನಗರದ ಕೆ.ಎಸ್.ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ನಿನ್ನೆ ಎರಡು ಜೋಡಿಗಳು ಸಿಕ್ಕಿಬಿದ್ದಿರುವ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದ್ದು, ಮಂಗಳೂರಿನ ಬಂದರು ಠಾಣೆಯ ಪೊಲೀಸರು ಪೊಕ್ಸೊ ಪ್ರಕರಣ ಸಹಿತ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಿಸಿದ್ದಾರೆ.

ನಗರದ ಸಾಯಿ ಪ್ಯಾಲೇಸ್ ಹೊಟೇಲ್ ಲಾಡ್ಜ್ ನಲ್ಲಿ ಎರಡು ಪ್ರತ್ಯೇಕ ಜೋಡಿಗಳು ರೂಂ ಮಾಡಿ ಇರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಎರಡೂ ಜೋಡಿಗಳನ್ನು ವಶಪಡಿಸಿಕೊಂಡಿದ್ದರು. ದಾಳಿ ನಡೆಸಿದ ಸಂದರ್ಭದಲ್ಲಿ ಯುವಕರು ಹಾಗೂ ಯುವತಿಯರು ಪ್ರತ್ಯೇಕ ರೂಂನಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂದರು ಪೊಲೀಸರು ಜೋಡಿಗಳನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದಾಗ ಇವರಲ್ಲಿ ಓರ್ವ ಅಪ್ರಾಪ್ತೆಯಾಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿಸಲಾಗಿದೆ. ಅಲ್ಲದೆ ಕೋವಿಡ್ ಕರ್ಫ್ಯೂ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಪ್ರಕರಣ ದಾಖಲಾಗಿದೆ.

ಕುದ್ರೋಳಿಯ ಶೇಖ್ ಮುಹಮ್ಮದ್ ಮತ್ತು ಬೋಳಾರದ ಮುಹಮ್ಮದ್ ರಹೀಂ ಬಂಧಿತ ಆರೋಪಿಗಳು. ಇವರು ನಗರದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಮತ್ತೊಂದು ಯುವತಿಯ ಜೊತೆ ಇದ್ದರು ಎನ್ನಲಾಗಿದೆ. ಹೊರಜಿಲ್ಲೆಯ ಈ ವಿದ್ಯಾರ್ಥಿನಿ ನಗರದ ಕಾಲೇಜೊಂದರಲ್ಲಿ ಕಲಿಯುತ್ತಿದ್ದು, ಅಪ್ರಾಪ್ತೆಯಾಗಿದ್ದಾಳೆ. ಇನ್ನೊಬ್ಬಳು ಸುರತ್ಕಲ್ ನಿವಾಸಿ ಎನ್ನಲಾಗಿದೆ.

- Advertisement -

Related news

error: Content is protected !!