- Advertisement -
- Advertisement -
ಬೆಂಗಳೂರು: ಕೆಲಸ ನೀಡುವುದಾಗಿ ನಂಬಿಸಿ ಮೋಸ ಮಾಡಿದ ಆರೋಪದಲ್ಲಿ ಸಮಾಜ ಕಲ್ಯಾಣ ಇಲಾಖಾ ಸಚಿವ ಶ್ರೀರಾಮುಲು ರವರ ಪಿಎಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಸಚಿವ ಶ್ರೀರಾಮುಲುರವರ ಪಿಎ ರಾಜಣ್ಣ ಬಂಧಿತ ಆರೋಪಿ ಎಂದು ಹೇಳಲಾಗಿದ್ದು, ಹತ್ತಾರು ಮಂದಿಗೆ ಕೆಲಸ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪದಡಿ ರಾಜಣ್ಣನ ವಿರುದ್ಧ ಎಫ್ ಐಆರ್ ದಾಖಲಾಗಿತ್ತು ಎಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದೆಯೇ ರಾಜಣ್ಣನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.


- Advertisement -








