Sunday, June 21, 2026
spot_imgspot_img
spot_imgspot_img

ಶಾಸಕ ಶ್ರೀನಿವಾಸಗೌಡರ ಪುತ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

- Advertisement -
- Advertisement -

ಕೋಲಾರ : ಶಾಸಕ ಶ್ರೀನಿವಾಸಗೌಡರ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕೋಲಾರ ತಾಲೂಕಿನ ಹೆಚ್ ಕ್ರಾಸ್ ಬಳಿ ನಡೆದಿದೆ.

ಕೋಲಾರ ಶಾಸಕ ಶ್ರೀನಿವಾಸಗೌಡರ ಪುತ್ರ ಮಂಜುನಾಥ್ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಧರೆಗೆ ಉರುಳಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮಂಜುನಾಥ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮಂಜುನಾಥ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎದುರಿಗೆ ಬಂದ ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂ ಗೊಂಡಿದೆ.

- Advertisement -

Related news

error: Content is protected !!