- Advertisement -
- Advertisement -
ವಿಜಯಪುರ: ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಆಂಬ್ಯುಲೆನ್ಸ್ ನಲ್ಲಿ ಹೆರಿಗೆಯಾಗಿ, ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.

ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿಯು ಮುದ್ದೇಬಿಹಾಳ ತಾಲೂಕಿನ ಬೈಲಕೂರು ಗ್ರಾಮದ ಭುವನೇಶ್ವರಿ ಬಸವರಾಜ ಛಲವಾದಿ (23).

ಗರ್ಭಿಣಿ ಭುವನೇಶ್ವರಿಯವರು ಹೆರಿಗೆ ನೋವಿನಿಂದ ಬಳಲುತ್ತಿದ್ದಾಗ ನಾಲತವಾಡದ 108 ಸಿಬ್ಬಂದಿ ಆಂಬ್ಯುಲೆನ್ಸ್ ನಲ್ಲಿ ಸುಲಭವಾಗಿ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಬಳಿಕ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಹೆರಿಗೆ ಬಳಿಕ ತಂಗಡಗಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಬಾಣಂತಿಯನ್ನು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.


- Advertisement -








