- Advertisement -
- Advertisement -
ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಮೃತಪಟ್ಟ ಘಟನೆ ನಗರ ಠಾಣಾ ವ್ಯಾಪ್ತಿಯ ಕಸಬಾ ದಲ್ಲಿ ನಡೆದಿದೆ.

ಮೃತ ಯುವತಿ ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19).

ಈ ಘಟನೆ ಬುಧವಾರ ಬೆಳಿಗ್ಗೆ ನಡೆದಿದ್ದು ಮನೆಯ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೃತ್ಯಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.


- Advertisement -