Tuesday, June 23, 2026
spot_imgspot_img
spot_imgspot_img

ತಾಯಿ ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆ!

- Advertisement -
- Advertisement -

ನಾಗಮಂಗಲ: ಕೆರೆಗೆ ಹಾರಿ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮೃತಪಟ್ಟವರು ಮಂಡ್ಯ ತಾಲೂಕು ಮಾಳೆ ಗ್ರಾಮದ ಗಿರೀಶ್ ಎಂಬುವರ ಪತ್ನಿ ಸಿಂಚನಾ(28) ಮತ್ತು ಇವರ ಮಕ್ಕಳಾದ ಮಹೇಂದ್ರ(6), ಡಿಂಪನಾ(3).

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿಂಚನಾ ತನ್ನ ಮಕ್ಕಳನ್ನು ಕರೆದುಕೊಂಡು ನಾಗಮಂಗಲದ ಹುಳ್ಳೇನಹಳ್ಳಿಯಲ್ಲಿರುವ ಅಜ್ಜಿ ಮನೆ ಬಂದಿದ್ದು, ಬುಧವಾರ ಮಧ್ಯಾಹ್ನ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಮೃತದೇಹಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು,ಈ ಹಿನ್ನೆಲೆಯಲ್ಲಿ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!