Saturday, June 27, 2026
spot_imgspot_img
spot_imgspot_img

ಬಂಟ್ವಾಳ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಹಲ್ಲೆ; ಎಫ್ಐಆರ್ ದಾಖಲು

- Advertisement -
- Advertisement -

ಬಂಟ್ವಾಳ: ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಹಿತ ಕರ್ತವ್ಯನಿರತ ಸಿಬ್ಬಂದಿ ಮೇಲೆ ಕೈಮಾಡಿ, ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಈ ಕುರಿತು ಬಂಟ್ವಾಳ ನಗರ ಪೊಲೀಸರಿಗೆ ನೀಡಿದ ದೂರಿನಂತೆ ಉಮ್ಮರ್ ಫಾರೂಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಈತನ ಪತ್ನಿ ಹೆರಿಗೆಗಾಗಿ ಒಳರೋಗಿಯಾಗಿ ದಾಖಲಾಗಿದ್ದ ಸಂದರ್ಭ ರಾತ್ರಿ ಸುಮಾರು 11ರ ವೇಳೆ ಹೆಂಡತಿಯನ್ನು ನೋಡಬೇಕು ಎಂದು ಸಿಬ್ಬಂದಿಯಲ್ಲಿ ಕೇಳಿದ ಸಂದರ್ಭ, ರಾತ್ರಿ ಸಮಯ ಮಹಿಳೆ ವಾರ್ಡ್ ಗೆ ಹೋಗಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದರೂ ಆರೋಪಿ, ಕೈಯಿಂದ ದೂಡಿ ಒಳಗೆ ಹೋಗಿರುತ್ತಾನೆ.

ಬಳಿಕ ಸಿಬ್ಬಂದಿ ಕರ್ತವ್ಯ ನಿರತ ವೈದ್ಯರಿಗೆ ತಿಳಿಸಿದಾಗ ವೈದ್ಯರು ಬಂದು ರಾತ್ರಿ ಸಮಯದಲ್ಲಿ ಹೆರಿಗೆ ವಾರ್ಡ್ ಗೆ ಹೋಗಲು ಅವಕಾಶ ಇರುವುದಿಲ್ಲ ಎಂದು ಹೇಳಿದಾಗ ಆರೋಪಿ ನಿಂದಿಸಿ ದೂಡಿ ಬೆದರಿಕೆ ಹಾಕಿ ಹೋಗಿದ್ದಾಗಿ ಠಾಣೆಗೆ ನೀಡಿದ ದೂರಿನಲ್ಲಿ ಹೇಳಲಾಗಿದೆ.

- Advertisement -

Related news

error: Content is protected !!