Monday, June 15, 2026
spot_imgspot_img
spot_imgspot_img

ನೆಲ್ಯಾಡಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿ; ಬೈಕ್ ಸವಾರ ಸಾವು, ಸಹ ಸವಾರ ಗಂಭೀರ!

- Advertisement -
- Advertisement -

ನೆಲ್ಯಾಡಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ದ್ವಿಚಕ್ರ ವಾಹನವು ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಅಪರಿಚಿತ ವಾಹನವು ಲಾವತ್ತಡ್ಕ ಸಮೀಪ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿರುವ ವ್ಯಕ್ತಿ ಸಕಲೇಶಪುರ ತಾಲೂಕಿನ ಕೆಂಚಮ್ಮನ ಹೊಸಕೋಟೆ ನಿವಾಸಿ ಮೋಹನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!