Monday, June 22, 2026
spot_imgspot_img
spot_imgspot_img

ಬೆಳ್ತಂಗಡಿ: ಚಾಲಕನ ಬೇಜವಾಬ್ದಾರಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಕಾರು; ಕಾರು ಚಾಲಕನ ವಿರುದ್ಧ ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ನ್ಯಾಚುರೋಪತಿ ಕಾಲೇಜು ಬಳಿ ನಡೆದಿದೆ.

ಜು.17 ರಂದು ಬೆಳ್ತಂಗಡಿ ತಾಲೂಕಿನ ಕಂಚಿಮಾರು ಬೈಲು ನಿವಾಸಿ ಸ್ವರಾಜ್ (22) ಎಂಬವರು ಉಜಿರೆಯಿಂದ ಧರ್ಮಸ್ಥಳ ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಉಜಿರೆಯ ನ್ಯಾಚುರೋಪತಿ ಕಾಲೇಜು ಬಳಿ ರಸ್ತೆಯ ಎಡಬದಿಯಲ್ಲಿ ನಿಲ್ಲಿಸಿದ್ದ ಕಾರನ್ನು ಚಾಲಕ ಹಬೀಬ್ ಎಂಬಾತ ತನ್ನ ದುಡುಕುತನದಿಂದ ಬಲಕ್ಕೆ ತಿರುಗಿಸಿ ಚಲಾಯಿಸಿದ್ದು, ಈ ವೇಳೆ ಕಾರು ಸ್ವರಾಜ್ ರವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಸ್ವರಾಜ್ ರಸ್ತೆಗೆಸೆಯಲ್ಪಟ್ಟ ಪರಿಣಾಮ ಹಲವು ಗಾಯಗಳಾಗಿದ್ದು, ಅವರು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!