Saturday, June 28, 2025
spot_imgspot_img
spot_imgspot_img

ಮಂಗಳೂರು: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್ ಫೆರ್ನಾಂಡಿಸ್!

- Advertisement -
- Advertisement -

ಮಂಗಳೂರು: ರಾಜ್ಯ ಸಭಾ ಸದಸ್ಯ ಹಿರಿಯ ರಾಷ್ಟ್ರೀಯ ಕಾಂಗ್ರೆಸ್‌ನ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದು, ಗಾಯಗೊಂಡ ಹಿನ್ನೆಲೆ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಅವರು ಜು.18 ರಂದು ಬೆಳಗ್ಗೆ ಯೋಗ ಮಾಡುವಾಗ ಆಯತಪ್ಪಿ ಬಿದ್ದಿದ್ದರು. ಆರಂಭದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷಿಸಿದ್ದ ಅವರು ಬಳಿಕ ಅದೇ ದಿನ ಸಂಜೆ ಮಾಮೂಲಿ ಆರೋಗ್ಯ ತಪಾಸಣೆಗೆಂದು ನಗರದ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈದ್ಯರು ಅವರನ್ನು ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಅವರ ಆರೋಗ್ಯದಲ್ಲಿ ಏರು ಪೇರಾಗಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಕರ್ ಫೆರ್ನಾಂಡಿಸ್ ಅವರಿಗೆ ಕೂಡಲೇ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿದೆ ಎಂಬುದಾಗಿ ವೈದ್ಯರು ಹೇಳಿದ್ದಾರೆ, ಸದ್ಯ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!