Tuesday, September 1, 2026
spot_imgspot_img
spot_imgspot_img

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದ ಡೇಟ್ ಫಿಕ್ಸ್!

- Advertisement -
- Advertisement -

ಬೆಂಗಳೂರು: ಕೋವಿಡ್​ ಆತಂಕದ ನಡುವೆಯೂ ನಡೆದ ಎಸೆಸೆಲ್ಸಿ ಪರೀಕ್ಷೆಯು ಯಶಸ್ವಿಯಾಗಿ ಮುಗಿದಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವು ಆಗಸ್ಟ್ 10ರೊಳಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟಾರೆ 96.65ರಷ್ಟು ಹಾಜರಾತಿ ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಕೋವಿಡ್​ ಭೀತಿಯ ನಡುವೆ ನಡೆದ ಪರೀಕ್ಷೆಯಲ್ಲಿ ಸರ್ಕಾರವು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಪರೀಕ್ಷೆ ನಡೆಸಿದೆ.

driving

ಎಸ್​ಎಸ್​ಎಲ್​ಸಿ ಪರೀಕ್ಷೆ ಮುಕ್ತಾಯವಾಗಿದ್ದು, ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‍ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

- Advertisement -

Related news

error: Content is protected !!