Thursday, October 8, 2026
spot_imgspot_img
spot_imgspot_img

ಬಂಟ್ವಾಳ: ಜುಲೈ 28ರಂದು ಪತ್ರಿಕಾ ದಿನಾಚರಣೆ ಮತ್ತು ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ಪ್ರೆಸ್ ಕ್ಲಬ್ ಸಹಯೋಗದೊಂದಿಗೆ ಬಿ.ಸಿ.ರೋಡ್ ನ ಪ್ರೆಸ್ ಕ್ಲಬ್ ನಲ್ಲಿ ಜುಲೈ 28ರಂದು ಬೆಳಗ್ಗೆ 10.30ಕ್ಕೆ  ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭ ಪತ್ರಿಕಾ ವಿತರಕರಿಗೆ ಸನ್ಮಾನ ನಡೆಯಲಿದೆ.

ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಬಂಟ್ವಾಳ ಉಪವಿಭಾಗ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಬಂಟ್ವಾಳ ಪ್ರೆಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಭಾಗವಹಿಸಲಿದ್ದಾರೆ.

ದಿನಪತ್ರಿಕೆ ಮಾರಾಟಗಾರರಾದ ವಿಟ್ಲದ ರಾಜಮ್ಮ ಕೆ.ವಿ, ವಗ್ಗದ ಲೋಕಯ್ಯ ಗೌಡ, ಬಿ.ಸಿ.ರೋಡಿನ ಮಿತ್ತಬೈಲಿನ ನರಸಿಂಹ ಪೈ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!