Friday, June 5, 2026
spot_imgspot_img
spot_imgspot_img

ಬಂಟ್ವಾಳ: ರೈಲ್ವೆ ಹಳಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆ!

- Advertisement -
- Advertisement -

ಬಂಟ್ವಾಳ: ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎನ್ನಲಾಗಿದೆ.

ಮೃತ ಯುವಕ ಕಾರ್ತಿಕ್ ಸಂಜೆ ಮನೆಯಿಂದ ಹೊರಟಿದ್ದು, ರಾತ್ರಿ 11 ಗಂಟೆಯವರೆಗೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಆತನ ಹುಡುಕಾಟ ಆರಂಭಿಸಿದ್ದರು.ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ:ಬಂಟ್ವಾಳ: ರೈಲ್ವೇ ಹಳಿ ಮೇಲೆ ಯುವಕ ಶವ ಪತ್ತೆ ಪ್ರಕರಣ; ಸೂಕ್ತ ತನಿಖೆ ನಡೆಸುವಂತೆ ಹಿಂದು ಜಾಗರಣ ವೇದಿಕೆಯಿಂದ ಮನವಿ

ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸಾವಿನ ಬಗ್ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ: ಸುಳ್ಯ: ಪಾದಚಾರಿಗೆ ಪಿಕಪ್ ಡಿಕ್ಕಿ; ವ್ಯಕ್ತಿ ಸಾವು

- Advertisement -

Related news

error: Content is protected !!