Wednesday, October 7, 2026
spot_imgspot_img
spot_imgspot_img

ಮಂಗಳೂರು: 21 ದಿನಗಳ ಒಳಗೆ ಜನನ, ಮರಣ ನೋಂದಣಿ ಮಾಡಿಕೊಂಡರೆ ಉಚಿತ ಪ್ರಮಾಣ ಪತ್ರ

- Advertisement -
- Advertisement -

ಮಂಗಳೂರು: ಜಿಲ್ಲೆಯ ನಾಗರಿಕರು ತಮ್ಮ ಕುಟುಂಬದಲ್ಲಿ ಸಂಭವಿಸುವ ಜನನ ಅಥವಾ ಮರಣಗಳನ್ನು ಸ್ಥಳೀಯ ನೋಂದಣಿ ಕಚೇರಿಯಲ್ಲಿ 21 ದಿನದೊಳಗೆ ನೋಂದಾಯಿಸಿಕೊಂಡಲ್ಲಿ, ಸಂಬಂಧಿಸಿದ ಪ್ರಮಾಣಪತ್ರವನ್ನು ಉಚಿತವಾಗಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 21 ದಿನದ ನಂತರ ನೋಂದಣಿ ಮಾಡಿಕೊಂಡಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ. 21 ದಿನದೊಳಗೆ ನೋಂದಣಿ ಮಾಡಿಕೊಂಡು ಪ್ರಮಾಣಪತ್ರ ಪಡೆಯಬಹುದು, ಜನನ-ಮರಣ ನೋಂದಣಿ ಯನ್ನು ಅಧಿನಿಯಮ 1969ರನ್ವಯ ಕಡ್ಡಾಯ ಮಾಡಲಾಗಿದೆ ಎಂದರು.

ಜನನ, ಮರಣ ನೋಂದಣಿ ಮಾಡಲು ಆನ್‌ಲೈನ್ ವ್ಯವಸ್ಥೆ ಜಾರಿಗೆ ತಂದಿದ್ದು, ಗಣಕೀಕೃತ ಪ್ರಮಾಣಪತ್ರ ವಿತರಿಸಲಾಗುತ್ತಿದೆ. ಗ್ರಾಮ ಲೆಕ್ಕಗರು, ಸರ್ಕಾರಿ ವೈದ್ಯಾಧಿಕಾರಿಗಳು, ಆರೋ ಗ್ಯಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಕರು, ಮನೆಯಲ್ಲಿ ಸಂಭವಿಸುವ ಜನನಗಳ ವರದಿ ಪಡೆದು, 21 ದಿನದೊಳಗೆ ಸಂಬಂಧಿಸಿದವರಿಗೆ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಿ, ಪ್ರಮಾಣಪತ್ರಗಳನ್ನು ವಿತರಿಸುವಂತೆ ಸೂಚಿಸಿದರು.

- Advertisement -

Related news

error: Content is protected !!