Tuesday, September 1, 2026
spot_imgspot_img
spot_imgspot_img

ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

- Advertisement -
- Advertisement -

ಶಿವಮೊಗ್ಗ: ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಯುವತಿಗೆ ನಿನ್ನೆ ಅಂದ್ರೆ ಶುಕ್ರವಾರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಹೀಗಾಗಿ, ಅದಕ್ಕೆ ಚಿಕಿತ್ಸೆಯೂ ಪಡೆದುಕೊಳ್ಳುತ್ತಿದ್ದಳು.

ಆದ್ರೆ, ಕುಟುಂಬಸ್ಥರು ಕೃಷಿ ಚಟುವಟಿಕೆಗೆ ಹೊಲಕ್ಕೆ ಹೋದ ಸಂದರ್ಭದಲ್ಲಿ ಹೊಟ್ಟೆನೋವು ತಾಳಲಾರದೆ, ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸದ್ಯ, ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!