Saturday, August 1, 2026
spot_imgspot_img
spot_imgspot_img

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ – ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ಭಾರಿ ಮಳೆ, ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ನೆರೆ ಸಂಕಷ್ಟ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಬಳಿಕ ಮಾತನಾಡಿ, ಮಳೆ ಕಡಿಮೆಯಾದರೂ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ನೀರು ತುಂಬಿಕೊಂಡಿದ್ದು, ನೀರು ಹಾಗೆಯೇ ನಿಂತಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿದೆ. ಇದರಿಂದಾಗಿ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದೆ. ಭಾರಿ ಮಳೆ ಪ್ರವಾಹದಿಂದಾಗಿ ರಾಜ್ಯದಲ್ಲಿ ಈವರೆಗೆ 13 ಜನ ಸಾವನ್ನಪ್ಪಿದ್ದಾರೆ. ಇಬ್ಬರು ಕಣ್ಮರೆಯಾಗಿದ್ದಾರೆ ಎಂದರು.

ಮಳೆಯಿಂದ ಶೇ.75ರಷ್ಟು ಭಾಗ ಮನೆಕಳೆದುಕೊಂಡವರಿಗೆ 5 ಲಕ್ಷ ಹಾಗೂ ಅರ್ಧ ಮನೆ ಕಳೆದುಕೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

- Advertisement -

Related news

error: Content is protected !!