Monday, July 27, 2026
spot_imgspot_img
spot_imgspot_img

ಯಡಿಯೂರಪ್ಪ ಪುತ್ರ ವಿಜಯೇಂದ್ರ ರವರಿಗೆ ಮಂತ್ರಿ ಸ್ಥಾನ ನೀಡಲು ಗ್ರೀನ್‌ ಸಿಗ್ನಲ್‌

- Advertisement -
- Advertisement -

ಬೆಂಗಳೂರು: ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಮಂತ್ರಿ ಸ್ಥಾನ ನೀಡಲು ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ತಿಳಿದುಬಂದಿದೆ. ಒಂದು ಮೂಲಗಳ ಪ್ರಕಾರ ವಿಜಯೇಂದ್ರ ಅವರಿಗೆ ಉಪಮುಖ್ಯಮಂತ್ರಿ ಪಟ್ಟದ ಜೊತೆಗೆ ಅಬಕಾರಿ ಖಾತೆ ಕೂಡ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಈ ಬಗ್ಗೆ ಕೇಂದ್ರದಲ್ಲಿ ಮಾತುಕತೆಯಾಗಿದ್ದು ಇನ್ನೇನು ಅಂತಿಮಪಟ್ಟಿ ಮಾತ್ರ ಹೊರಬೀಳಬೇಕಿದೆ ಎಂದು ಹೇಳಲಾಗುತ್ತಿದೆ. ಕೇವಲ ವಿಜಯೇಂದ್ರ ಅವರಿಗೆ ಮಾತ್ರವಲ್ಲದೆ ಇವರ ಎದುರಾಳಿ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೂ ಮಂತ್ರಿ ಸ್ಥಾನ ಒಲಿಯಲಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಚಿವ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು, ಯಾರನ್ನು ಕೈಬಿಡಬೇಕು ಎಂಬುದರ ಬಗ್ಗೆ ಎರಡು ಮೂರು ಸುತ್ತು ಮಾತುಕತೆಯಾಗಿದೆ. ಹಳಬರಲ್ಲಿ ಕೆಲವರನ್ನು ಕೈ ಬಿಟ್ಟು ಯುವಕರಿಗೆ ಅವಕಾಶ ನೀಡುವ ಬಗ್ಗೆ ಹೈಕಮಾಂಡ್‌ ಒಲವು ತೋರಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!