Tuesday, July 1, 2025
spot_imgspot_img
spot_imgspot_img

ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ತೀರ್ಥಸ್ನಾನ ನಿಷೇಧ

- Advertisement -
- Advertisement -

ಬಂಟ್ವಾಳ: ಕೋವಿಡ್-29 ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸರಕಾರದ ನಿರ್ದೇಶನದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದು, ಬಂಟ್ವಾಳ ತಾಲೂಕು ಕಾರಿಂಜದ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ  ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಪ್ರಕಟನೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಆ.5 ರಿಂದ 7 ರವರೆಗೆ ನೇಗಿಲ ನೆನಪು ಭತ್ತದ ಗದ್ದೆ ನಾಟಿ ಕಾರ್ಯಕ್ರಮ

ಆ.8 ರಂದು ಆಟಿ ಅಮಾವಾಸ್ಯೆಯಂದು ಭಕ್ತಾದಿಗಳು ಇಲ್ಲಿನ ಗದಾ ತೀರ್ಥದಲ್ಲಿ ತೀರ್ಥಸ್ನಾನ ನಡೆಸಿ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಆದರೆ ಕೋವಿಡ್ ನಿಯಂತ್ರಣಕ್ಕಾಗಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವುದರಿಂದ ತೀರ್ಥಸ್ನಾನಕ್ಕೆ ಅವಕಾಶ ನೀಡಲಾಗುವುದಿಲ್ಲ. ನಿಯಮ ಪಾಲನೆ ಅನುಷ್ಠಾನಕ್ಕಾಗಿ ಆ ದಿನದಂದು ಗದಾ ತೀರ್ಥದ ಸುತ್ತ ಪೊಲೀಸ್ ಬಂದೋಬಸ್ತ್ ಎರ್ಪಡಿಸಲಾಗುವುದು, ಭಕ್ತಾಧಿಗಳು ಸಹಕರಿಸಬೇಕಾಗಿ ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ತಿಳಿಸಿದ್ದಾರೆ.

- Advertisement -

Related news

error: Content is protected !!